Monday, April 21, 2025
Google search engine

Homeರಾಜ್ಯನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಸಿ.ಟಿ.ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ.ಸುಧಾಕರ್, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕಕರು ವಿಜಯೇಂದ್ರ ಕಾರ್ಯಕ್ರಮದಿಂದ ದೂರು ಉಳಿದಿದ್ದಾರೆ. ಇದರೊಂದಿಗೆ ವಿಜಯೇಂದ್ರಗೆ ಆರಂಭದಲ್ಲೇ ಬಂಡಾಯದ ಬಿಸಿ ತಟ್ಟಿದೆ. ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular