ಶಿವಮೊಗ್ಗ: ಅಂಬೇಡ್ಕರ್ ಅವರ ೬೭ನೇ ವರ್ಷದ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ.ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಡಿಸಿ ಸಿದ್ದಲಿಂಗರೆಡ್ಡಿ, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಿ.ಮಲ್ಲೇಶಪ್ಪ, ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಗುರುಮೂರ್ತಿ, ಚಿನ್ನಯ್ಯ, ರಾಜಕುಮಾರ್, ಮಹಾಲಿಂಗಪ್ಪ, ಅಧಿಕಾರಿ/ಸಿಬ್ಬಂದಿ ಉಪಸ್ಥಿತರಿದ್ದರು.