ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 16ರ ಮಂಗಳವಾರ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ(ಜುಲೈ16 ) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಣೆ ಮಾಡಿದ್ದಾರೆ.