ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ ೨೦೨೪ಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಜೂನ್ ೩ರಂದು ಮತದಾನ ನಡೆಯಲಿದ್ದು, ಮತಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಮತದಾರರು ಮತ ಹಾಕಲು ಅನುಕೂಲ ಕಲ್ಪಿಸುವ ಹಿತದೃಷ್ಠಿಯಿಂದ ಜೂನ್ ೩ರಂದು ಬೆಳಿಗ್ಗೆ ಬೆಳಿಗ್ಗೆ ೫ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಸಂತೆ ಮತ್ತು ಜಾತ್ರೆಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.