ಮಂಡ್ಯ:ಕೆ ಆರ್ ಎಸ್ ಡ್ಯಾಮ್ ನಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ 5,308 ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆ ಮಂಡ್ಯ ಜಿಲ್ಲೆ ವ್ಯಾಪ್ತಿಯ ನಾಲೆಗೆನೀರು ಹರಿಸುವಂತೆ ಮಂಡ್ಯದ ಸಂಜಯ್ ವೃತ್ತದಲ್ಲಿ, ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬೆಳೆಗೆ ನೀರು ಬಿಡದೆ ತಮಿಳುನಾಡಿಗೆ ನೀರು ಕೊಟ್ಟಿದ್ದಾರೆ, ನಮಗೂ ನೀರು ಕೊಡಿ ನಾಲೆಗೆ ನೀರು ಹರಿಸಿ ಬೆಳೆಗೆ ಅವಕಾಶ ಮಾಡಿಕೊಡಿ, ಇಲ್ಲದಿದ್ದರೆ ನಾಳೆಯೇ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಅಲ್ಲದೆ ಈ ಕೂಡಲೇ ಸರ್ಕಾರ ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ರೈತರು ಒತ್ತಾಯಿಸಿದರು.