Friday, April 4, 2025
Google search engine

Homeರಾಜ್ಯಏರ್ ಶೋ ಹಿನ್ನೆಲೆ ಫೆಬ್ರವರಿ 13, 14 ರಂದು ಬೆಂಗಳೂರಿನ ಈ ಭಾಗದ ಕಾಲೇಜುಗಳಿಗೆ ರಜೆ...

ಏರ್ ಶೋ ಹಿನ್ನೆಲೆ ಫೆಬ್ರವರಿ 13, 14 ರಂದು ಬೆಂಗಳೂರಿನ ಈ ಭಾಗದ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಇದೇ ಫೆಬ್ರವರಿ 13, 14ರಂದು ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಕಾಲೇಜುಗಳ ತರಗತಿ ರದ್ದುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏರ್ ಫೋರ್ಸ್ ಸ್ಟೇಷನ್ ಮತ್ತು ಯಲಹಂಕದ ಸುತ್ತಮುತ್ತಲಿನ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ.

ಫೆಬ್ರವರಿ 13 ಮತ್ತು 14ರಂದು ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದ್ದು, ಈ ಏರ್ ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುತ್ತಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ರದ್ದುಪಡಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ.

ಬೆಂಗಳೂರು ಏರ್ ಶೋ ‘ಏರೋ ಇಂಡಿಯಾ 2025’ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ, ಏರ್ ಶೋ ವೇಳೆ ಅತ್ತ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಪ್ರಯಾಣಿಕ ವಿಮಾನಗಳ ಹಾರಾಟದಲ್ಲಿ ತುಸು ವ್ಯತ್ಯಯಕ್ಕೂ ಕಾರಣವಾಗಲಿದೆ. ಏರ್ ಶೋ ನಡೆಯುವ ಸಂದರ್ಭಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳ್ಳಲಿದೆ.

RELATED ARTICLES
- Advertisment -
Google search engine

Most Popular