ವರದಿ: ಸತೀಶ್ ಆರಾಧ್ಯ, ಪಿರಿಯಾಪಟ್ಟಣ
ಪಿರಿಯಾಪಟ್ಟಣ:ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿಗೆ ಮತ್ತು ಎಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಿರಿಯಾಪಟ್ಟಣದಲ್ಲಿ ಸಂಭ್ರಮಾಚರಣೆ ಮಾಡಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕರು ಪ್ರಮಾಣವಚನವನ್ನು ನೇರವಾಗಿ ವೀಕ್ಷಿಸಲು ಬೃಹತ್ ಎಲ್ಇಡಿ ಟಿವಿ ಪರದೆ ಅಳವಡಿಸಲಾಗಿತ್ತು, ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಬಸವೇಶ್ವರ ವೃತ್ತದಲ್ಲಿ ನೆರೆದಿದ್ದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ತಮ್ಮ ನಾಯಕರುಗಳಿಗೆ ಜೈಕಾರವನ್ನು ಕೂಗುವ ಮೂಲಕ ಸಂಭ್ರಮಿಸಿ ಬಳಿಕ ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು.

ಈ ಸಂದರ್ಭ ತಾಲೂಕು ಬಿಜೆಪಿ ಅಧ್ಯಕ್ಷ ಕೊಪ್ಪ ರಾಜೇಂದ್ರ, ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮೈತ್ರಿ ಪಕ್ಷದ ಮುಖಂಡರಾದ ಮಂಜುನಾಥ್ ಸಿಂಗ್, ಪಿ.ಸಿ ಕೃಷ್ಣ, ವಿಕ್ರಂರಾಜ್, ಆರ್.ಟಿ ಸತೀಶ್, ಚನ್ನಬಸವರಾಜು, ರವಿ, ರಾಘವೇಂದ್ರ, ಬೆಮ್ಮತ್ತಿ ಚಂದ್ರು, ಟಿ.ರಮೇಶ್, ಶುಭಗೌಡ, ಜವರಪ್ಪ, ಮತ್ತಿತರಿದ್ದರು.