Saturday, April 19, 2025
Google search engine

Homeರಾಜ್ಯಸುದ್ದಿಜಾಲಡಿ. 7ರಂದು ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ : ಶಾಸಕರು, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಡಿ. 7ರಂದು ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ : ಶಾಸಕರು, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಚಾಮರಾಜನಗರ: ಮುಖ್ಯಮಂತ್ರಿಗಳು ಡಿ. ೭ರಂದು ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ, ಕೊಳ್ಳೇಗಾಲ ಪಟ್ಟಣ ಹಾಗೂ ಯಳಂದೂರು ಪಟ್ಟಣದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಿದರು.

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿರುವ ಲಕ್ಷö್ಮಮ್ಮ ಸೊಸಯ್ಯನ ಸಿದ್ದಯ್ಯ ಸರ್ಕಾರಿ ಶಾಲೆಯಯಲ್ಲಿ ಸಭೆ ನಡೆಸಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದಾನಿಗಳ ಸಹಕಾರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸರ್ಕಾರಿ ಶಾಲೆಗಳ ೧೨ ಕೊಠಡಿಗಳನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಈ ಕಾರ್ಯಕ್ರಮ ಸಂಬAಧ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಮುಖ್ಯಮಂತ್ರಿಗಳು ಗ್ರಾಮಕ್ಕೆ ಆಗಮಿಸುವ ವೇಳೆ ಸ್ವಾಗತ, ಶಾಲಾ ಆವರಣದಲ್ಲಿ ಪೂರಕವಾಗಿ ಕೈಗೊಳ್ಳಬೇಕಿರುವ ಸಿದ್ದತೆ ಹಾಗೂ ರೂಪುರೇಷೆಗಳ ಕುರಿತು ಎಲ್ಲವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಶಾಲೆಯ ಮುಂಭಾಗದಲ್ಲಿರುವ ರಸ್ತೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬಳಿಕ ಸತ್ತೇಗಾಲ ಗ್ರಾಮದಲ್ಲಿ ನಡೆಯಲಿರುವ ಸಮಾರಂಭದ ಸ್ಥಳವನ್ನು ಪರಿಶೀಲಿಸಿ ವೇದಿಕೆ ನಿರ್ಮಾಣ, ಆಸನಗಳ ವ್ಯವಸ್ಥೆ, ವಾಹನ ನಿಲುಗಡೆ ಸಂಬAಧ ಅಗತ್ಯ ಸೂಚನೆಗಳನ್ನು ನೀಡಿದರು.

ನಂತರ ಕೊಳ್ಳೇಗಾಲ ಪಟ್ಟಣಕ್ಕೆ ಭೇಟಿ ನೀಡಿದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿಗಳು ಭಾಗವಹಿಸಲಿರುವ ಡಾ. ರಾಜೇಂದ್ರ ಮಹಾಸ್ವಾಮಿಗಳ ಜಯಂತೋತ್ಸವ ಕಾರ್ಯಕ್ರಮ ಆಯೋಜಿಸುತ್ತಿರುವ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲಾ ಆವರಣವನ್ನು ಪರಿಶೀಲಿಸಿದರು. ಮುಖ್ಯಮಂತ್ರಿಗಳು ಭೇಟಿ ನೀಡಲಿರುವ ಇನ್ನಿತರ ಸ್ಥಳಗಳನ್ನು ವೀಕ್ಷಿಸಿದರು.

ಬಳಿಕ ಯಳಂದೂರು ಪಟ್ಟಣಕ್ಕೆ ಭೇಟಿ ಕೊಟ್ಟು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿರುವ ತಾಲೂಕು ಮಟ್ಟದ ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಸಂಬAಧ ಪರಿಶೀಲನೆ ನಡೆಸಿದರು. ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಸಾರ್ವಜನಿಕ ಸಮಾರಂಭಕ್ಕೆ ಅಗತ್ಯವಿರುವ ಆಸನಗಳು, ವೇದಿಕೆ, ಮೈದಾನವನ್ನು ಸಜ್ಜುಗೊಳಿಸುವ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ತಿಳಿಸಿದರು.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಶಿಷ್ಟಾಚಾರ ಅನುಸಾರ ಎಲ್ಲವನ್ನು ಪಾಲನೆ ಮಾಡಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ಎಲ್ಲ ಸಿದ್ದತಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಶಾಸಕರು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ಶಾಲಾ ನಿರ್ಮಾಣ ದಾನಿಗಳಾದ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಎಸ್. ಮರಿಸ್ವಾಮಿ, ಬಿ.ಆರ್.ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ತಹಶೀಲ್ದಾರರಾದ ಬಸವರಾಜು, ಜಯಪ್ರಕಾಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆಂಪರಾಜು, ಎಸ್‌ಡಿಎಂಸಿ ಅಧ್ಯಕ್ಷರಾದ ಕಾಂತರಾಜು, ಕೊಳ್ಳೇಗಾಲ ನಗರಸಭಾ ಪೌರಾಯುಕ್ತರಾದ ರಮೇಶ್, ಇನ್ನಿತರ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular