ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸಂಜೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಸ್ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ 5:30ಕ್ಕೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಈ ಒಂದು ಶ್ರದ್ಧಾಂಜಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸೇರಿದಂತೆ ಪಕ್ಷದ ನಾಯಕರು ಸಚಿವರು, ಶಾಸಕರು,ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.