Friday, April 11, 2025
Google search engine

Homeಅಪರಾಧಬಾಗಪ್ಪ ಹರಿಜನ ಕೊಲೆ ಪ್ರಕರಣ​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ

ಬಾಗಪ್ಪ ಹರಿಜನ ಕೊಲೆ ಪ್ರಕರಣ​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ

ವಿಜಯಪುರ: ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಎ1 ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್​ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ‌‌ ವಿಚಾರವಾಗಿ ರವಿ ಹಾಗೂ ಭಾಗಪ್ಪ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನು ಈ ಹಿಂದೆ ಹತ್ಯೆ ಮಾಡಿದ್ದರು ಎನ್ನಲಾಗಿದೆ. ರವಿ ಹತ್ಯೆಗೆ ಪ್ರತಿಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಬಾಗಪ್ಪನನ್ನ ಹತ್ಯೆಗೈದು ಸೇಡು ತಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಪಿಸ್ತೂಲ್ ಬಳಸಿ ಗುಂಡು ಹಾರಿಸಿ ಬಳಿಕ ಮಚ್ಚಿನಿಂದ ಹೊಡೆದು ಬಾಗಪ್ಪ ಹರಿಜನ ಹತ್ಯೆಗೈಯಲಾಗಿದ್ದು ಪೊಲೀಸರು ಆರೋಪಿಗಳಿಂದ ಪಿಸ್ತೂಲ್, ಮಚ್ಚು, ಸೇರಿದಂತೆ ಕೃತ್ಯಕ್ಕೆ ಬಳಸಿದ ಆಟೋ ಮತ್ತು ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular