Saturday, April 19, 2025
Google search engine

Homeಅಪರಾಧಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿಕೆ

ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ನಿನ್ನೆಯಷ್ಟೇ ಕೋರ್ಟ್ ಜಾಮೀನು ನೀಡಿತ್ತು. ಆ ಬಳಿಕ ಇಂದು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ ಎನ್ನುವಂತೆ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್.23ಕ್ಕೆ ಮುಂದೂಡಿದೆ.

ಒಂದೆಡೆ ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದಾರೆ. ಮತ್ತೊಂದೆಡೆ ಈ ಕೇಸಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿತು. ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದ್ದರಿಂದಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.೨೩ಕ್ಕೆ ಮುಂದೂಡಲಾಗಿದೆ. ಹೀಗಾಗಿ ಅಲ್ಲಿಯವರೆಗೆ ಶಾಸಕ ಮುನಿರತ್ನಗೆ ಜೈಲೇಗತಿ ಆದಂತೆ ಆಗಿದೆ.

RELATED ARTICLES
- Advertisment -
Google search engine

Most Popular