Friday, April 4, 2025
Google search engine

Homeಅಪರಾಧಕಾನೂನುನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರು

ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ. ನ್ಯಾ. ವಿಶ್ವಜಿತ್‌ ಶೆಟ್ಟಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ.11 ರಂದು ನಟ ದರ್ಶನ್‌ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಈ ನಡುವೆ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ನಟನನ್ನು ಶಿಫ್ಟ್‌ ಮಾಡಲಾಗಿತ್ತು.

ಬೆನ್ನು ನೋವಿನ ಕಾರಣ ನಟನಿಗೆ ಶಸ್ತ್ರಚಿಕಿತ್ಸೆ ಅಗತ್ಯತೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿನ ಮೇಲೆ ಈಚೆಗೆ ಬಿಡುಗಡೆ ಮಾಡಲಾಗಿತ್ತು. ಸದ್ಯ ದರ್ಶನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇನ್ನು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.

ಈ ನಡುವೆ ಜಾಮೀನಿಗಾಗಿ ದರ್ಶನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಗುರುವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಈಗ ಜಾಮೀನು ಮಂಜೂರಾಗಿದೆ.

RELATED ARTICLES
- Advertisment -
Google search engine

Most Popular