Friday, April 11, 2025
Google search engine

Homeಅಪರಾಧಬಜ್ಪೆ; ದನಗಳನ್ನು ಕಳವುಗೈದ ಪ್ರಕರಣದಲ್ಲಿ ಇಬ್ಬರ ಬಂಧನ

ಬಜ್ಪೆ; ದನಗಳನ್ನು ಕಳವುಗೈದ ಪ್ರಕರಣದಲ್ಲಿ ಇಬ್ಬರ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ಹೊರವಲಯದ ತೆಂಕ ಎಡಪದವು ಗ್ರಾಮದ ಪದರಂಗಿ ಕೊರ್ಡೇಲ್ ಎಂಬಲ್ಲಿ ಮೇಯಲು ಬಿಟ್ಟ ದನಗಳನ್ನು ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಮುಹಮ್ಮದ್ ರಫೀಕ್ ಯಾನೆ ರಫೀಕ್ (31) ಮತ್ತು ಶೌಕತ್ ಅಲಿ ಯಾನೆ ಶೌಕತ್ (34) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ದನಕಳವು ಮಾಡಲು ಬಳಸಿರುವ ಸುಮಾರು 3 ಲಕ್ಷ ರೂ. ಮೌಲ್ಯದ ಕಾರು ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.19ರಂದು ತೆಂಕ ಎಡಪದವು ಗ್ರಾಮದ ಪಂಚಾಯತ್ ಕಚೇರಿ ಬಳಿ ಮೇಯಲು ಬಿಟ್ಟ ದನ ಮತ್ತು ಪದರಂಗಿ ಕೊರ್ಡೇಲ್ ಎಂಬಲ್ಲಿ ಡಿ.21ರಂದು ಮೇಯಲು ಬಿಟ್ಟ ದನಗಳು ಕಳವಾದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.

ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆ, ಉಡುಪಿಯ ಅಜೇಕಾರು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿರುತ್ತವೆ. ತಲೆಮರೆಸಿಕೊಂಡಿರುವ ಆರೋಪಿತರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

RELATED ARTICLES
- Advertisment -
Google search engine

Most Popular