ಮಂಗಳೂರು (ದಕ್ಷಿಣ ಕನ್ನಡ): ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು. ರ್‍ಯಾಲಿಯಲ್ಲಿ ಮುರಳೀಕೃಷ್ಣ ಹಸಂತ್ತಡ್ಕ ಮುಖ್ಯ ಭಾಷಣಕಾರರಾಗಿದ್ದರು. ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಕುಣಿಗಲ್ ಲ್ಲಿ ಪೊಲೀಸರು ಬಂಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ.
ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದು ಮುಖಂಡರನ್ನು ಬಂಧಿಸಿ ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ .ಈ ದೇಶದ್ರೋಹಿ ಕೃತ್ಯವನ್ನು ಭಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆ ವಿರುದ್ಧ ಭಜರಂಗದಳ ನಿರಂತರವಾಗಿ ಹೋರಾಟ ನಡೆಸುತ್ತದೆ .ನೀವು ನಮ್ಮನ್ನು ಬಂಧಿಸಿದರು ನಮ್ಮ ಹೋರಾಟ ನಿಲ್ಲದು ಎಂದು ಬಜರಂಗದಳ ಮಂಗಳೂರು ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಸಿದೆ.