Sunday, June 8, 2025
Google search engine

Homeರಾಜ್ಯಸುದ್ದಿಜಾಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಡಗರದಿಂದ ಬಕ್ರೀದ್ ಹಬ್ಬದ ಆಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಡಗರದಿಂದ ಬಕ್ರೀದ್ ಹಬ್ಬದ ಆಚರಣೆ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಅಝ್‌ಹಾ’ ಅಂದ್ರೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ.

ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಹಾಝ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಖತೀಬ್ ಅಬ್ದುಲ್ ಮಜೀದ್ ಫಾಳಿಲಿ ಅವರ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು.

RELATED ARTICLES
- Advertisment -
Google search engine

Most Popular