ಶ್ರೀರಂಗಪಟ್ಟಣ:ಪಟ್ಟಣದಲ್ಲಿ ಗುರುವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಪಟ್ಟಣ ಹಾಗೂ ಗಂಜಾಂನ ಮಸೀದಿಗಳ ಬಳಿ ಬಂದು ಜಮಾಯಿಸಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ , ನಂತರ ಈದ್ಗ ಮೈದಾನಕ್ಕೆ ತೆರಳಿ ಅಲ್ಲಿ ಯು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಮುಸ್ಲೀಂ ಬಾಂದವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಮುಸ್ಲೀಂ ಮುಖಂಡರು ಒಬ್ಬರಿಗೊಬ್ಬರು ಅಪ್ಪಿಕೊಂಡು ಶುಭಾಶಯಗಳ ವಿನಿಮಯ ಮಾಡಿಕೊಳ್ಳುತ್ತಿದ್ದರು.
ಈದ್ಗಾ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಮುಸ್ಲೀಂ ರು ಅಲ್ಲಾ ಹು ಅಕ್ಬರ್ ಘೋಷಣೆಗಳನ್ನು ಕೂಗುತ್ತಿದ್ದರು.
ಈದ್ಗಾ ಮೈದಾನದಲ್ಲಿ ಧರ್ಮ ಗುರುಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಈ ವೇಳೆ ಧರ್ಮ ಗುರುಗಳು ಬಕ್ರೀದ್ ಹಬ್ಬದ ಶುಭ ಸಂದೇಶ ನೀಡಿದರು.
ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.