Saturday, April 19, 2025
Google search engine

Homeರಾಜ್ಯಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿಷೇಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿಷೇಧ


ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೆಚ್ಚುತ್ತಿರುವ ಅಪಘಾತವನ್ನು ತಡೆಗಟ್ಟುವ ಸಲುವಾಗಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬೈಕ್, ಆಟೋ, ಟ್ರ್ಯಾಕ್ಟರ್ ಹಾಗೂ ಸಣ್ಣ ಪುಟ್ಟ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಅತೀ ವೇಗದ ಚಾನಲೆ, ರಸ್ತೆ ನಿಯಮ ಉಲ್ಲಂಘನೆ, ವಿರುದ್ಧ ದಿಕ್ಕಿನಿಂದ ಸಂಚಾರ ಸೇರಿದಂತೆ ಹಲವು ಕಾರಣಗಳಿಂದ ಎಕ್ಸ್‌ಪ್ರೆಸ್ ವೇನಲ್ಲಿನ ಅಪಘಾತ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೀಗ ಕಟ್ಟ ನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುವ ವಾನಗಳಿಗೆ ಗಂಟೆಗೆ ೮೦ರಿಂದ ೧೦೦ ಕಿಲೋಮೀಟರ್ ವೇಗದ ಮಿತಿ ನಿಗದಿಪಡಿಸಲಾಗಿದೆ. ಈ ಕುರಿತೂ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಅತೀ ವೇಗದ ಚಾಲನೆ, ಲೇನ್ ಬದಲಾಯಿಸುವಿಕೆ, ದಿರ್ಢೀ ನಿಲ್ಲಿಸುವಿಕೆಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ದ್ವಿಚಕ್ರ ವಾಹನ ಸವಾರರು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದಾರೆ. ಹೆಚ್ಚಿನ ಅಪಘಾತದ ಹಿಂದೆ ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾ ಕಾರಣವಿದೆ. ಹೀಗಾಗಿ ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾ ಸಂಚಾರ ನಿಷೇಧಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular