- ವರದಿ: ಸ್ಟೀಫನ್ ಜೇಮ್ಸ್ ಬೆಳಗಾವಿ ಬೆಳಗಾವಿ
ಬೆಳಗಾವಿ: ಇಲ್ಲಿನ ವಂಟಮುರಿ ಕಾಲೊನಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ನಿಖಿತಾ ಮಾದರ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ’ ಎಂದು ಆರೋಪಿಸಿ ಕುಟುಂಬದವರು ಆಸ್ಪತ್ರೆ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮಕೊಟ್ಟಿದ್ದಾರೆ. ನಂತರ ಆರೋಗ್ಯದಲ್ಲಿ ಏರುಪೇರಾದರೂ ವೈದ್ಯರು ಮಾಹಿತಿ ಕೊಟ್ಟಿಲ್ಲ. ಅವರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ’ ಎಂದು ದೂರಿದರು. ಸಾಗಿಸಿದರು ‘ನಿಖಿತಾ ಅವರಿಗೆ ಸಿಸೇರಿಯನ್ ಮೂಲಕ ಮೊದಲ ಹೆರಿಗೆಯಾಗಿತ್ತು.
ಹೆರಿಗೆ ಶನಿವಾರ ಬೆಳಿಗ್ಗೆ ಎರಡನೇ ನಡೆಯಬೇಕಿತ್ತು. ಆದರೆ, ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಶುಕ್ರವಾರವೇ ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ.ಗಡಾದ ತಿಳಿಸಿದರು.
‘ಬಾಣಂತಿ ಕುಟುಂಬದವರ ದೂರು ಆಧರಿಸಿ, ಪ್ರಕರಣದ ತನಿಖೆಗಾಗಿ ತಂಡ ರಚಿಸುತ್ತೇವೆ. ತಪ್ಪೆಸಗಿರುವುದು ಕಂಡುಬಂದರೆ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ ದಂಡಗಿ ಹೇಳಿದರು.