ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಯ ಜಮೀನುಗಳಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿದೆ. ಮಳವಳ್ಳಿ, ಮದ್ದೂರು ತಾಲೂಕು ಬಳಿಕ ಶ್ರೀರಂಗಪಟ್ಟಣದಲ್ಲಿ ಆನೆಗಳ ಸಂಚಾರ ಕಂಡು ಬಂದಿದ್ದು ಮೊಬೈಲ್ ನಲ್ಲಿ ಸ್ಥಳೀಯರು ಅದನ್ನು ಸೆರೆಹಿಡಿದಿದ್ದಾರೆ. ಅಲ್ಲದೆ ಗ್ರಾಮದ ಹಲವು ಜಮೀನಿನಲ್ಲಿ ಬೆಳೆದಿದ್ದ ಕಬ್ಬನ್ನು ಆನೆಗಳ ಹಿಂಡು ನಾಶಪಡಿಸಿದೆ ಎಂದು ತಿಳಿದುಬಂದಿದೆ.
