Friday, April 11, 2025
Google search engine

Homeಅಪರಾಧಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಕೂಡಲೆ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ.

ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್​ ವೆಸ್ಟ್​ ಎಂಡ್​​ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್​ನಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.

ಸೈನಿಕ ಶಾಲೆಗೆ ಬಾಂಬ್ ಬೆದರಿಕೆ

ಕಳೆದ ವಾರ ಸೆಪ್ಟೆಂಬರ್​ 18 ರಂದು ಅಶೋಕ್ ನಗರದಲ್ಲಿನ ಸೈನಿಕ ಶಾಲೆಗೂ ಕೂಡ ಬಾಂಬ್ ಬೆದರಿಕೆ ಇ-ಮೇಲ್​ ಬಂದಿತ್ತು. ಶಾಲೆಯಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular