Friday, April 4, 2025
Google search engine

Homeರಾಜ್ಯಸುದ್ದಿಜಾಲಬಂಟ್ವಾಳ: ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಬಂಟ್ವಾಳ: ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ತಡೆಗೆ ಹಾಕಿದ್ದ ತಡೆಬೇಲಿಯಲ್ಲಿ ಗೂಡ್ಸ್ ವಾಹನವೊಂದು ಸಿಲುಕಿದ ಘಟನೆ ಇಂದು ನಡೆದಿದೆ.

ಸುರಕ್ಷತೆಯ ದೃಷ್ಟಿಯಿಂದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಈ ಹಿನ್ನೆಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ತಡೆಬೇಲಿ ಅಳವಡಿಸಲಾಗಿದೆ.

ಇಂದು ಬೆಳಗ್ಗೆ ಶಂಭೂರು ಕಡೆಯಿಂದ ಬಂದ ಮಸಾಲೆ ಪೌಡರ್ ಸಾಗಾಟದ ಗೂಡ್ಸ್ ವಾಹನವನ್ನು ಚಾಲಕ ಬೇಕೂಂತಲೇ ತಡೆಬೇಲಿ ಮೂಲಕ ನುಗ್ಗಿಸಿದ್ದಾನೆ. ಈ ವೇಳೆ ವಾಹನವು ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ.

ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸೇತುವೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸಿಲುಕಿಕೊಂಡಿದ್ದ ವಾಹನವನ್ನು ಹರಸಾಹಸ ತೆರವುಗೊಳಿಸಲಾಯಿತು.

RELATED ARTICLES
- Advertisment -
Google search engine

Most Popular