Friday, April 18, 2025
Google search engine

Homeರಾಜ್ಯಬಂಟ್ವಾಳ: ನೆರೆಹಾವಳಿ ಪ್ರದೇಶಕ್ಕೆ ಆರ್. ಅಶೋಕ್ ಭೇಟಿ ಪರಿಶೀಲನೆ

ಬಂಟ್ವಾಳ: ನೆರೆಹಾವಳಿ ಪ್ರದೇಶಕ್ಕೆ ಆರ್. ಅಶೋಕ್ ಭೇಟಿ ಪರಿಶೀಲನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಿಂದ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಳ ಭಾಗದ ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಜನರು ಸಂಕಷ್ಟ ಎದುರಿಸುವಂತಾಗಿದೆ. ನೆರೆಬಾಧಿತ ಪ್ರದೇಶಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಬಿಜೆಪಿ ಹಿರಿಯ ನಾಯಕ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು. ಬಳಿಕ ಆರ್. ಅಶೋಕ, ರಾಜ್ಯದಲ್ಲಿ ಭಾರಿ ಮಳೆಯಿಂದ ಬಹಳಷ್ಟು ಹಾನಿಯಾಗಿದ್ದು, ೧೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular