Friday, April 11, 2025
Google search engine

Homeಅಪರಾಧಬಂಟ್ವಾಳ: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

ಬಂಟ್ವಾಳ: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

ಬಂಟ್ವಾಳ: ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದ ಮರುದಿನವೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾಕ್ ಗೆ ಬಲಿಯಾದ ದುರಂತ ಘಟನೆ ತಾಲೂಕಿನಲ್ಲಿ ನಡೆದಿದೆ.

ಲಾರಿಯೊಂದರಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ವಯರ್ ತಾಗಿ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ  ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕೆಮ್ಮನ್ ಕಾಡಬೆಟ್ಟು ಎಂಬಲ್ಲಿ ಜು.20ರ ಶನಿವಾರ ಮಧ್ಯಾಹ್ನ ನಡೆದಿದೆ.

ಕಲ್ಲಡ್ಕ ಸಾಲಿಯಾನ್ ಶಾಮಿಯಾನದ  ಕೆಲಸಗಾರರು ಎಂದು ಸ್ಥಳೀಯರು ತಿಳಿಸಿದ್ದು, ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ನಾಲ್ವರು ಕೆಲಸಗಾರರು ಉತ್ತರಪ್ರದೇಶ ಮೂಲದವರು ಎಂದು ಹೇಳಲಾಗುತ್ತಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular