ಮಂಗಳೂರು ; ಅಕ್ಟೋಬರ್ 3- ಬ್ಯಾರಿ ಸಮುದಾಯಕ್ಕೆ ಸಂಭ್ರಮದ ದಿನ. ಯಾಕೆಂದರೆ ಈ ದಿನ ಬ್ಯಾರಿ ಭಾಷೆ ಸರ್ಕಾರದಿಂದ ಮಾನ್ಯತೆ ಪಡೆದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಜೂರಾದ ದಿನ. ಈ ಹಿನ್ನೆಲೆಯಲ್ಲಿ ವಿವಿಧೆಡೆ ಬ್ಯಾರಿ ಭಾಷಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮೇಲ್ತೆನೆ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆಯು ನಾಟೆಕಲ್‌ನ ಇ-ಲೈಟ್ ಟ್ಯೂಶನ್ ಸೆಂಟರ್ ನಲ್ಲಿ ನಡೆಯಿತು.
ಹಾಗೆಯೇ ಮಂಗಳೂರು ವಿವಿ ಕಾಲೇಜಿನಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ ಮತ್ತು ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿವಿ ನೇತೃತ್ವದಲ್ಲಿ ಬ್ಯಾರಿ ಭಾಷಾ ದಿನಾಚರಣೆಯನ್ನು ಆಚರಿಸಲಾಯಿತು.
ಇದ್ರ ಜೊತೆಗೆ ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದಿಂದ ಮಂಗಳೂರಿನ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡಾ ನಡೆಯಿತು.
