ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಹಿನ್ನಲೆ ರಾಜ್ಯ ಸರ್ಕಾರ ಕ್ರಮ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ರೈತರಿಂದ ವಿನೂತನವಾಗಿ ಬಾರುಕೋಲು ಚಳವಳಿ ನಡೆಸಲಾಯಿತು.
ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ಪಟ್ಟಣದ ಕುವೆಂಪು ವೃತ್ತದ ಬಳಿ ಬಾರುಕೋಲು ಹಿಡಿದು ರೈತರು ಚಳವಳಿ ನಡೆಸಿದ್ದು, ಸರ್ಕಾರಕ್ಕೆ ಚಾಟಿ ಬೀಸದ್ದಾರೆ.
ಕೂಡಲೇ ನೀರು ನಿಲ್ಲಿಸಿ ಇಲ್ಲದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ರೈತರು ಜಲ ಸಂಪೂನ್ಮೂಲ ಸಚಿವ ಡಿ ಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದರು.