ಶ್ರೀ ಸವಿತಾ ಮಹರ್ಷಿ ಮತ್ತು ಶ್ರೀ ತ್ಯಾಗರಾಜಸ್ವಾಮಿಯವರ ಆರಾಧನಾ ಮಹೋತ್ಸವ ಕಾರ್ಯಕ್ರಮ
ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಶೈಕ್ಷಣಿಕ, ಸಾಮಾಜಿಕವಾಗಿ ಅಭಿವೃದ್ಧಿಗೆ ಸಂಘಟನೆ ಅವಶ್ಯಕವಾಗಿದ್ದು ಸಮಾಜದ ಸಂಘಟನೆಯ ಸಂಘದಲ್ಲಿ ರಾಜಕೀಯ ಪ್ರವೇಶಿಸದಂತೆ ಎಚ್ಚರವಹಿಸಬೇಕು ಎಂದು ತಾಲೂಕು ಸವಿತಾ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ ರವಿಕುಮಾರ್ ಹೇಳಿದರು.
ಸಾಲಿಗ್ರಾಮ ಪಟ್ಟಣದಲ್ಲಿ ಸಾಲಿಗ್ರಾಮ ತಾಲೂಕು ಮಂಗಳವಾದ್ಯ ಮತ್ತು ಕಲಾವಿದರ ಸಂಘ ಹಾಗೂ ತಾಲೂಕು ಸವಿತಾ ಸಮಾಜ ಅಭಿವೃದ್ಧಿ ಸಂಘಗಳಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಸವಿತಾ ಮಹರ್ಷಿ ಮತ್ತು ಶ್ರೀ ತ್ಯಾಗರಾಜಸ್ವಾಮಿಯವರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದಲ್ಲಿ ಸಂಘಟನೆಯ ಕೊರತೆಯಿಂದಾಗಿ ನಮ್ಮ ಸಮಾಜದಲ್ಲಿನ ಕೆಲವರು ಸರಕಾರ ನೀಡುವ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮುಂದುವರಿದ ಸಮಾಜಗಳ ಕಾರ್ಯಚಟುವಟಿಕೆಗಳನ್ನು ಆದರ್ಶವನ್ನಾಗಿಸಿಕೊಂಡು ಒಗ್ಗಟ್ಟಾಗಬೇಕು ಜತೆಗೆ ಸಮುದಾಯದವರು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಲಿ. ಆದರೆ, ಸಂಘ ಮತ್ತು ಸಂಘಟನೆಯಲ್ಲಿ ರಾಜಕೀಯ ಹಸ್ತಕ್ಷೇಪವಾಗದಂತೆ ಜಾಗರೂಕತೆ ವಹಿಸಬೇಕು ಎಂದು ಹೇಳಿದರು.

ಇದಕ್ಕೂ ಮೊದಲು ಬಾಸ್ಕರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ. ಪೂರ್ಣ ಕುಂಭಕಲಸ ಹೊತ್ತ ಮಹಿಳೆಯರು ಮತ್ತು ಸಮಾಜದ ಹಿರಿಯರು, ಮುಖಂಡರು ಹಾಗೂ ಯುವಕರು ಮಂಗಳವಾದ್ಯದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ಸವಿತಾ ಮಹರ್ಷಿ ಮತ್ತು ಶ್ರೀ ತ್ಯಾಗರಾಜಸ್ವಾಮಿಯವರ ಭಾವಚಿತ್ರಗಳೊಂದಿಗೆ ಮೆರವಣಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಾಲಿಗ್ರಾಮ ತಾಲೂಕು ಮಂಗಳವಾದ್ಯ ಕಲಾವಿದರ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಹದೇವ, ಕಾರ್ಯದರ್ಶಿ ನಟರಾಜ್, ಎಸ್. ಬಿ. ಹರೀಶ್, ತಾಲೂಕು ಸವಿತಾ ಸಮಾಜ ಅಭಿವೃದ್ಧಿ ಸಂಘದ ಗೌರವಾಧ್ಯಕ್ಷರು ಚೆನ್ನಯ್ಯ, ಉಪಾಧ್ಯಕ್ಷ ಜೀವನ್, ಕಾರ್ಯದರ್ಶಿ ಎಸ್. ಬಿ. ಹರೀಶ್, ಖಜಾಂಚಿ ರಾಜೇಶ್, ಸುಕೇಶ್ ಪುನೀತ್ ರಾಜೇಶ್ ದಿನಪತ್ರಿಕೆ ಹಂಚಿಕೆದಾರ ಅಮಿತ್ ಶಾರದಮ್ಮ, ರಾಜಮ್ಮ, ನಾಗಮ್ಮ, ಗೌರಮ್ಮ, ಜಯಲಕ್ಷ್ಮಿ ಸೇರಿದಂತೆ ಮತ್ತಿತರು ಇದ್ದರು.