ಪಿರಿಯಾಪಟ್ಟಣ: ನಾವೆಲ್ಲರೂ ಮಹಾತ್ಮರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಮುಖ್ಯ ಶಿಕ್ಷಕ ಬಿ.ಪಿ ಚನ್ನೇಗೌಡ ತಿಳಿಸಿದರು.
ತಾಲೂಕಿನ ಬೆಕ್ಕರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಾಂಧಿಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ತಮ್ಮ ಪ್ರಾಣ ಬಲಿದಾನ ನೀಡಿದ ಮಹನೀಯರ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ತಾವು ಕಲಿತ ಶಾಲೆ ಹಾಗೂ ಪೋಷಕರಿಗೆ ಉತ್ತಮ ಹೆಸರು ತರುವಂತೆ ತಿಳಿಸಿದರು. ಈ ಸಂದರ್ಭ ಎಸ್ ಡಿಎಂಸಿ ಅಧ್ಯಕ್ಷ ಕುಮಾರ್, ಸದಸ್ಯ ಮಹದೇವ್, ಶಿಕ್ಷಕರಾದ ವಿಶುಕುಮಾರ್, ಯೋಗೇಶ್, ಕೃಷ್ಣ ಹಾಗು ವಿದ್ಯಾರ್ಥಿಗಳು ಇದ್ದರು.
