ಬೆಂಗಳೂರು : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ಸುಧೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು, ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶ ನೀಡಿದ್ದಾರೆ. ಪ್ರಕರಣ ಬಗ್ಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಅ.೨೫ಕ್ಕೆ ಕಾಯ್ದಿರಿಸಿದೆ.
ಸೀಝ್ ಆಗಿದ್ದ ೧೧,೩೧೨ ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.