Thursday, April 17, 2025
Google search engine

Homeಅಪರಾಧಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ

ಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ.

ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್​ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.

ಹಲ್ಲೆಕೋರರ ಆರೋಪವೇನು?

ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ.

ಹಲ್ಲೆಗೊಳಗಾದ ಬಳಿಕ ಮಹಿಳೆಯು ದೂರು ನೀಡಲು ಸಮೀಪದ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, 2 ದಿನ ಪೊಲೀಸ್ ಠಾಣೆಗೆ ಅಲೆದರೂ ದೂರು ಸ್ವೀಕರಿಸಲು ನಿರಾಕರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಹಿಳೆ, ‘ಜೀವ ಭಯ ಇದೆ, ರಕ್ಷಣೆ ಕೊಡಿ’ ಎಂದು ಮನವಿ ಬೆಳಗಾವಿ ಕಮಿಷನರ್​ಗೆ ದೂರು ನೀಡಿದ್ದರು. ನಂತರ ಇದೀಗ ಕಮಿಷನರ್​ ಸೂಚನೆ ಮೇರೆಗೆ ಶುಕ್ರವಾರ ರಾತ್ರಿ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 115(2), 3(5), 331, 352 ಹಾಗೂ 74 ರ ಅಡಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

RELATED ARTICLES
- Advertisment -
Google search engine

Most Popular