Thursday, December 18, 2025
Google search engine

Homeರಾಜ್ಯಸುದ್ದಿಜಾಲಬೆಳಗಾವಿ ಅಧಿವೇಶನ: ನೃತ್ಯ ಮಾಡಿ ಪ್ರತಿಭಟನೆ ಮಾಡಿದ ಹಕ್ಕಿಪಿಕ್ಕಿ ಸಮುದಾಯ.

ಬೆಳಗಾವಿ ಅಧಿವೇಶನ: ನೃತ್ಯ ಮಾಡಿ ಪ್ರತಿಭಟನೆ ಮಾಡಿದ ಹಕ್ಕಿಪಿಕ್ಕಿ ಸಮುದಾಯ.

ವರದಿ :ಸ್ಟೀಫನ್ ಜೇಮ್ಸ್.

ಬೆಳಗಾವಿ: ‘ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್ ಸೇರಿದಂತೆ ನಾಗರಿಕರಿಗೆ ಬೇಕಾದ ಅಗತ್ಯ ದಾಖಲೆಗಳನ್ನು ನಮಗೂ ನೀಡಬೇಕು’ ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಂಯೋಜಕ) ನೇತೃತ್ವದಲ್ಲಿ ಹಕ್ಕಿ-ಪಿಕ್ಕಿ ಸಮುದಾಯದವರು ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಗುರುವಾರ ನೃತ್ಯ ಮಾಡಿ ವಿನೂತನವಾಗಿ ಪ್ರತಿಭಟಿಸಿದರು.

ಖಾನಾಪುರ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ನಾವು ಗಡ್ಡೆಗೆಣಸು ತಿಂದು ಬದುಕು ಸಾಗಿಸುತ್ತಿದ್ದೇವೆ. ಸರ್ಕಾರದಿಂದ ನಮಗೆ ಯಾವ ಸೌಲಭ್ಯವೂ ಸಿಕ್ಕಿಲ್ಲ. ಮುಖ್ಯವಾಗಿ ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ ಕೊಟ್ಟಿಲ್ಲ. ಹಲವು ವರ್ಷಗಳಿಂದ ಹೋರಾಟ ಮಾಡಿದರೂ ನ್ಯಾಯ ಸಿಕ್ಕಿಲ್ಲ. ಸರ್ಕಾರ ವಿಶೇಷ ಪ್ರಕರಣ ಎಂದು ಪರಿಗಣಿಸಿ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಡಿವೈಎಸ್‌ಪಿ ಮೂಲಕ ಸ್ಥಳೀಯ ಠಾಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿತ್ತು. ಈಗ ಅದೇ ರೀತಿ ಪ್ರಕ್ರಿಯೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಎನ್‌.ಶಂಕರ, ವಿಠಲ ಸಗರಮನ್ನವರ, ದುರ್ಗಪ್ಪ ದಂಡಿನ್ನವರ, ರಾಜಶೇಖರ ಹಿಂಡಲಗಿ, ರಾಘವೇಂದ್ರ ಛಲವಾದಿ, ಸಂಗೀತಾ ಕದಂ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

RELATED ARTICLES
- Advertisment -
Google search engine

Most Popular