ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ₹ 5 ಲಕ್ಷ ಪರಿಹಾರ ನೀಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ನಡೆದ ಮತದಾರರಿಗೆ ಅಭಿನಂದನೆ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಮೃತ ಬಾಣಂತಿಯರ ಕುಟುಂಬಗಳಿಗೆ ಈಗಾಗಲೇ ಮೊದಲು ₹2 ಲಕ್ಷ ಪರಿಹಾರ ಘೋಷಿಸಲಾಗಿತ್ತು. ಈ ಮೊತ್ತವನ್ನು 5 ಲಕ್ಷಕ್ಕೆ ಏರಿಸಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು.