Sunday, January 11, 2026
Google search engine

Homeರಾಜ್ಯಬಳ್ಳಾರಿ ಬ್ಯಾನರ್‌ ಗಲಾಟೆ; ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಬ್ಯಾನರ್‌ ಗಲಾಟೆ; ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯಲ್ಲಿ ಭಾರಿ ಸುದ್ದಿಯಲ್ಲಿದ ವಾಲ್ಮೀಕಿ ಬ್ಯಾನರ್‌ ಅಳವಡಿಸುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಉಂಟಾದ ಕಾರ್ಯಕರ್ತನ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದ್ದು, ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಿದೆ. ಇನ್ನೂ ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ ಎನ್ನಲಾಗಿದೆ.

ಈ ಬಗ್ಗೆ ಗೃಹ ಸಚಿವ ಪರಮೇಶ್ವರ್​​ ಅವರು ಬಳ್ಳಾರಿ ಪ್ರಕರಣವನ್ನು ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಹೇಳಿದ್ದರು. ಆ ಬೆನ್ನಲ್ಲೇ ಇದೀಗ ಆದೇಶ ಹೊರಬಿದ್ದಿದೆ.

ಈ ಬಗ್ಗೆ ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು, ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ. ಅಗತ್ಯಬಿದ್ದರೆ ಸಿಐಡಿಗೆ ಪ್ರಕರಣ ಕೊಡುತ್ತೇವೆ ಎಂದು ಹೇಳಿದ್ದರು.

ಇನ್ನೂ ರಾಜಶೇಖರ್ ಸಾವಿಗೆ ಶಾಸಕ ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿಯೇ ನೇರ ಕಾರಣ, ಇಬ್ಬರನ್ನೂ ತಕ್ಷಣ ಬಂಧಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದರು. ಮೊನ್ನೆಯಷ್ಟೇ ಎರಡು ಬಾರಿ ರಾಜಶೇಖರ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದಿದ್ದ ರೆಡ್ಡಿ ಈಗ ಅಂತ್ಯಕ್ರಿಯೆ ಸಂಬಂಧ ಇನ್ನೊಂದು ವಿಡಿಯೋ ರಿಲೀಸ್ ಮಾಡಿದ್ದಾರೆ.

ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ಅಂತ್ಯಕ್ರಿಯೆಯಲ್ಲಿ ಸಾಕ್ಷ್ಯನಾಶದ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಸಾಕ್ಷ್ಯಾಧಾರ ರಿಲೀಸ್ ಮಾಡಿದ್ದಾರೆ. ಮೊದಲು ಅಂತ್ಯಸಂಸ್ಕಾರಕ್ಕೆ ಗುಂಡಿ ತೋಡಿ ಬಳಿಕ ಸುಟ್ಟು ಹಾಕಿದ್ದಾರೆ. ಕಟ್ಟಿಗೆ ಬದಲು ಗ್ಯಾಸ್‌ನಿಂದ ಮೃತದೇಹ ಸುಟ್ಟಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ. ಇನ್ನೂ ಸ್ಮಶಾನದಲ್ಲಿ ಗುಂಡಿ ತೋಡುವ ಸೋಮ ಎಂಬ ವ್ಯಕ್ತಿಯ ಹೇಳಿಕೆ ಬಿಡುಗಡೆ ಮಾಡಿದ್ದು, ಶಾಸಕ ಭರತ್ ರೆಡ್ಡಿ ಸೂಚನೆಯಂತೆಯೇ ಮೃತದೇಹವನ್ನು ಸುಡಲಾಗಿದೆ ಅಂತ ವಿಡಿಯೋ ಸಾಕ್ಷ್ಯ ನೀಡಿದ್ದಾರೆ. ಬಳ್ಳಾರಿ ಮೇಲೆ ಹಿಡಿತ ಸಾಧಿಸಲು ಮುಂದಾಗಿರುವ ಬಿಜೆಪಿ ಇದೇ 17ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದೆ.

RELATED ARTICLES
- Advertisment -
Google search engine

Most Popular