Friday, April 11, 2025
Google search engine

Homeರಾಜ್ಯಬಳ್ಳಾರಿ ಕೇಸ್‌ಗೂ ಬೆಳಗಾವಿಯಲ್ಲಿನ ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣಕ್ಕೂ ಸಂಬಂಧವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಬಳ್ಳಾರಿ ಕೇಸ್‌ಗೂ ಬೆಳಗಾವಿಯಲ್ಲಿನ ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣಕ್ಕೂ ಸಂಬಂಧವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿದ ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಳ್ಳಾರಿ ಪ್ರಕರಣಗಳಿಗೂ, ಬಿಮ್ಸ್ ಗೂ ಸಂಬಂಧ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ. ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ, ಸಾವು ತಡೆಯಲು ಯಾವ ಕ್ರಮ ಕೈಗೊಳ್ಳಬೇಕು. ಏನೆಲ್ಲಾ ಮಾಡಬೇಕು ಅದನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ನಮ್ಮ ಜಿಲ್ಲೆಯಲ್ಲಿ ೫೪ ಲಕ್ಷ ಜನಸಂಖ್ಯೆಯಿದೆ. ಹೀಗಾಗಿ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್ ಬೇಬಿ ಹೀಗೆ ಅನೇಕ ಕಾರಣಗಳಿವೆ. ೧ಲಕ್ಷ ಮಕ್ಕಳು ಹುಟ್ಟಿದರೆ ೨೮ ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ ೬ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್ ಪಾತ್ರವಾಗಿದೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

RELATED ARTICLES
- Advertisment -
Google search engine

Most Popular