Sunday, January 4, 2026
Google search engine

Homeರಾಜ್ಯಬಳ್ಳಾರಿ ಘರ್ಷಣೆ ಪ್ರಕರಣ : ತನಿಖೆಗೆ ವಿಜಯೇಂದ್ರ ಆಗ್ರಹ

ಬಳ್ಳಾರಿ ಘರ್ಷಣೆ ಪ್ರಕರಣ : ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು : ಫ್ಲೆಕ್ಸ್ ಅಳವಡಿಸುವ ಸಂಬಂಧ ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಗುಂಡು ಹಾರಿಸಿದ್ದು ಯಾರು ಮತ್ತು ಯಾರ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂಬ ಸತ್ಯ ಹೊರಬರಲು, ನಿಮ ಮುಲಾಜಿನಲ್ಲಿ ಇರುವ ತನಿಖೆಯಿಂದ ಸಾಧ್ಯವಿಲ್ಲ. ಸರ್ಕಾರಕ್ಕೆ ಸ್ವಲ್ಪವಾದರೂ ನೈತಿಕತೆ ಇದ್ದರೆ, ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಿಸಿ ಎಂದು ಒತ್ತಾಯಿಸಿದ್ದಾರೆ.

ಇನ್ನೂ ಈ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಗೂಂಡಾ ವರ್ತನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ನಿಮ ವೈಫಲ್ಯ ಮರೆಮಾಚಲು ಪ್ರಾಮಾಣಿಕ ಅಧಿಕಾರಿಗಳನ್ನು ಬಲಿಪಶು ಮಾಡುವ, ಅವರ ಸ್ಥೈರ್ಯ ಕುಗ್ಗಿಸುವ ಈ ಕೆಟ್ಟ ಕಾಂಗ್ರೆಸ್‌‍ ಪ್ರವೃತ್ತಿ ಈ ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

ಈ ವೇಳೆ ಬಳ್ಳಾರಿಯಲ್ಲಿ ನಡೆಸಿದ ಗೂಂಡಾಗಿರಿ, ನಮ ಪಕ್ಷದ ಶಾಸಕರ ಹಾಗೂ ಕಾರ್ಯಕರ್ತರ ಮೇಲಿನ ಹತ್ಯೆ ಪ್ರಯತ್ನ, ಹಲ್ಲೆ, ಕಾನೂನು ಸುವ್ಯವಸ್ಥೆಯ ಸಂಪೂರ್ಣ ಕುಸಿತ, ಓರ್ವನ ಪ್ರಾಣಹಾನಿಯ ಗಂಭೀರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು, ಈ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರ ಕೇವಲ 1 ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಿರುವುದು, ತನ್ನ ಅಪ್ರಬುದ್ಧತೆ, ವೈಫಲ್ಯ ಮುಚ್ಚಿಕೊಳ್ಳಲು ನಡೆಸುತ್ತಿರುವ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ನಿಮ್ಮದೆ ಶಾಸಕರ ಪ್ರಚೋದನಾಕಾರಿ ನಡವಳಿಕೆ ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರ ಪುಂಡಾಟಿಕೆಯನ್ನು ನಿಯಂತ್ರಿಸುವ ಬದಲು, ಓರ್ವ ಅಧಿಕಾರಿಯನ್ನು ಬಲಿಪಶು ಮಾಡುವುದು ಎಷ್ಟು ಸರಿ? ಅಧಿಕಾರಿಗೆ ಕನಿಷ್ಠ ಪರಿಸ್ಥಿತಿಯನ್ನು ಅವಲೋಕಿಸಲು ಕಾಲಾವಕಾಶವನ್ನೇ ನೀಡದೆ ಅಮಾನತು ಮಾಡಿರುವುದು ನಿಮ ಆಡಳಿತದ ದಿವಾಳಿತನವನ್ನು ತೋರಿಸುತ್ತಿದೆ.

ಸಾರ್ವಜನಿಕವಾಗಿ ಗುಂಡು ಹಾರಿಸಿ ಭಯೋತ್ಪಾದನೆ ನಡೆಸಿದ ಶಾಸಕರ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ? ಕೇವಲ ಅಧಿಕಾರಿಗಳ ತಲೆದಂಡದಿಂದ ಸತ್ಯವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular