Thursday, May 1, 2025
Google search engine

Homeರಾಜ್ಯಸುದ್ದಿಜಾಲಬಳ್ಳಾರಿ: ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ

ಬಳ್ಳಾರಿ: ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ

ಬಳ್ಳಾರಿ: ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಅಂಗವಾಗಿ ಬುಧವಾರ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬಸವೇಶ್ವರರ ಪುತ್ಥಳಿಗೆ ಜಿಲ್ಲಾಡಳಿತ ವತಿಯಿಂದ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಾಂಸ್ಕೃತಿಕ ನಾಯಕ ಬಸವೇಶ್ವರರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು.

ಮಹಾಮಾನವತಾವಾದಿ ಬಸವೇಶ್ವರರ ಆಚಾರ- ವಿಚಾರಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದ ಅವರು, ಇದೇ ಸಂದರ್ಭದಲ್ಲಿ ಬಸವೇಶ್ವರ ಜಯಂತಿಯ ಶುಭಾಶಯ ತಿಳಿಸಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ ಕೆ.ಇ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಅನೇಕರು ಇದ್ದರು.

RELATED ARTICLES
- Advertisment -
Google search engine

Most Popular