ಬಳ್ಳಾರಿ : ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬ.ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ತಮ್ಮ ಅಧಿಕೃತ ಶಾಸಕರ ಕಚೇರಿಯನ್ನು ಉದ್ಘಾಟಿಸಿದರು.
ನಗರದ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಅಹವಾಲು ಹೇಳಿಕೊಳ್ಳಲು, ನಿವಾಸ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತಿದ್ದು, ಸರಿಯಾದ ಸಮಯ ಒದಗಿಸಲಾಗುತ್ತಿಲ್ಲ ಎನ್ನುವ ಉದ್ದೇಶದಿಂದ, ಈ ಕಚೇರಿಯಲ್ಲಿ ಕೆಲಸದ ಅವಧಿಗಳಲ್ಲಿ ಭೇಟಿ ನೀಡಿ ಸಾರ್ವಜನಿಕರು ಅಹವಾಲುಗಳನ್ನ ಸಲ್ಲಿಸಬಹುದಾಗಿದೆ ಎಂದು ಶಾಸಕ ಭರತ್ ರೆಡ್ಡಿ ಹೇಳಿದರು.
ಈ ಸಂದರ್ಭದಲ್ಲಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಮಾಜಿ ಮೇಯರ್ ರಾಜೇಶ್ವರಿ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಇತರರು ಹಾಜರಿದ್ದರು.
