Sunday, April 20, 2025
Google search engine

Homeರಾಜ್ಯಸುದ್ದಿಜಾಲಬಳ್ಳಾರಿ ವಾರ್ತಾ ಇಲಾಖೆಯಲ್ಲಿ ಡಾ. ರಾಜ್‌ಕುಮಾರ್ ಅವರ ಜಯಂತಿ ಆಚರಣೆ

ಬಳ್ಳಾರಿ ವಾರ್ತಾ ಇಲಾಖೆಯಲ್ಲಿ ಡಾ. ರಾಜ್‌ಕುಮಾರ್ ಅವರ ಜಯಂತಿ ಆಚರಣೆ

ಬಳ್ಳಾರಿ: ಭಾರತೀಯ ಚಿತ್ರರಂಗ ಕಂಡ ಅದ್ಭುತ ನಟ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ.ರಾಜ್ ಕುಮಾರ್ ಅವರ 96ನೇ ಜನ್ಮ ದಿನಾಚರಣೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು.

ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ರಾಜ್ ಕುಮಾರ್ ಭಾವಚಿತ್ರಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ. ಪುಷ್ಪ ನಮನ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ವಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಹೊನ್ನೂರಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಸಿ.ಗುರುರಾಜ್, ಸಿಬ್ಬಂದಿ ರೋಜಾ ಮೇರಿ, ಎಚ್.ವಿಜಯ್ ಕುಮಾರ್, ಹನುಮೇಶ್. ಎಚ್.ಮಲ್ಲೇಶಪ್ಪ. ವೈ., ವರದಿಗಾರ ಮಹೇಂದ್ರಕುಮಾರ್, ಪಿ.ಟಿ.ಚೌಧರಿ, ರವಿ, ಛಾಯಾಗ್ರಾಹಕ ರುದ್ರಮುನಿ ಸ್ವಾಮಿ, ತರಬೇತುದಾರ ಅಭಿಷೇಕ್, ತಿಪ್ಪೇಸ್ವಾಮಿ ಹಾಗೂ ಎಂಸಿಎಂಸಿ ಸಮಿತಿ ಸಿಬ್ಬಂದಿ ತಿಪ್ಪೇಸ್ವಾಮಿ, ರಾಜು. ವಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular