ಬಳ್ಳಾರಿ: 09-ಬಳ್ಳಾರಿ (ಪ.) ಲೋಕಸಭೆ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ನಾಲ್ಕನೇ ದಿನವಾದ ಬುಧವಾರ ನಾಲ್ಕು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಹಿರೇಹಾಳ್, ಪಿಜಿಪಿ (ಪ್ರಹಾರ್ ಜನಶಕ್ತಿ ಪಾರ್ಟಿ) ಪಕ್ಷದಿಂದ ಮಂಜುನಾಥ್ ಗೋಸಲ್, ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಕೊಳಗಲ್ ಕೃಷ್ಣಪ್ಪ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ವೈ. ಪಂಪಾಪತಿ ಸೇರಿದಂತೆ ಒಟ್ಟು ನಾಲ್ವರು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.
ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 12ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇಹ್. ಸೋಮವಾರ 15ರಂದು ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಇಹ್. 16ರಂದು ನಾಮಪತ್ರ ಸಲ್ಲಿಕೆ ಇರುವುದಿಲ್ಲ. ಇಹ್. 17ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇದುವರೆಗೆ ಒಟ್ಟು 09 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
