Wednesday, June 25, 2025
Google search engine

Homeಅಪರಾಧಬೆಂಗಳೂರು: 23 ವರ್ಷದ ಯುವತಿ ಆಯತಪ್ಪಿ ಕಟ್ಟಡದಿಂದ ಬಿದ್ದು ಸಾವು

ಬೆಂಗಳೂರು: 23 ವರ್ಷದ ಯುವತಿ ಆಯತಪ್ಪಿ ಕಟ್ಟಡದಿಂದ ಬಿದ್ದು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಮದ್ಯಪಾನ ವೇಳೆ ಆಯತಪ್ಪಿ ಕಟ್ಟಡದಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಚೂಡಸಂದ್ರದಲ್ಲಿ ನಡೆದಿದೆ.

ಮೃತಳನ್ನು ಆಂಧ್ರ ಪ್ರದೇಶ ಮೂಲದ ನಂದಿನಿ (23) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ನಂದಿನಿ ನಿನ್ನೆ ಸಂಜೆ ತನ್ನ ಸ್ನೇಹಿತರೊಂದಿಗೆ ಚೂಡಸಂದ್ರದ ಬಳಿ ಇರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದ ಮೇಲೆ ಹೋಗಿದ್ದಳು. ಅಲ್ಲಿಯೇ ಮದ್ಯಪಾನ ಮಾಡುತ್ತಿರುವ ವೇಳೆ ಈ ಭೀಕರ ಘಟನೆ ಸಂಭವಿಸಿದೆ.

ಘಟನೆಯ ವಿವರಗಳ ಪ್ರಕಾರ, ನಂದಿನಿ ಹಾಗೂ ಆಕೆ ಜೊತೆಗಿದ್ದ ಸ್ನೇಹಿತರು ಮದ್ಯಪಾನ ಮಾಡುತ್ತಿದ್ದ ಸಮಯದಲ್ಲಿ ಮೊಬೈಲ್‌ನಲ್ಲಿ ವಿಡಿಯೋ ಹಾಗೂ ರೀಲ್ಸ್‌ಗಳನ್ನು ತಯಾರಿಸುತ್ತಿದ್ದರು. ಈ ವೇಳೆ ನಿರ್ಲಕ್ಷ್ಯವಾಗಿ ನಡೆದುಕೊಂಡ ನಂದಿನಿ, ಆಯತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ತೀವ್ರವಾಗಿ ಗಾಯಗೊಂಡಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular