Thursday, April 17, 2025
Google search engine

Homeಅಪರಾಧಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಡಿಜೆ ಹಳ್ಳಿಯ ಕೆಎಚ್‌ ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಎರಡು ಬೈಕ್‌ ನಲ್ಲಿ ಬಂದ ನಾಲ್ವರು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಕಪಿಲ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮೃತ ರೌಡಿಶೀಟರ್ ಕಪಿಲ್‌, 2014ರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಡಿ.ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆಗೆ ಡಿಸಿಪಿ ಭೀಮಾಶಂಕರ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ರಾತ್ರಿ ಎಂಟು ಗಂಟೆ ಸುಮಾರಿಗೆ ಸ್ನೇಹಿತರನ್ನು ನೋಡಲು ಡಿ.ಜೆ.ಹಳ್ಳಿಗೆ ಕಪಿಲ್ ಬಂದಿದ್ದ. ಈ ವೇಳೆ ಎರಡು ಬೈಕ್‌ ಗಳಲ್ಲಿ ಹೆಲ್ಮೆಟ್  ಧರಿಸಿ ದುಷ್ಕರ್ಮಿಗಳು ಬಂದಿದ್ದರು. ಬೈಕ್‌ವೊಂದರ ನಂಬರ್ ಪ್ಲೇಟ್ ಮೇಲೆ ಅನುಮಾನ ಪಟ್ಟ ಕಪಿಲ್‌, ನಂಬರ್ ಪ್ಲೇಟ್ ನೋಡುವಂತೆ ಸ್ನೇಹಿತನನ್ನು ಕಳುಹಿಸಿದ್ದಾನೆ.

ಸ್ನೇಹಿತ ಹೋಗುತ್ತಿದ್ದಂತೆ ಕಪಿಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸುಮಾರು ನೂರು ಮೀಟರ್ ಅಟ್ಟಿಸಿಕೊಂಡು ಹೋಗಿ ಕಪಿಲ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕಪಿಲ್‌, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular