Friday, April 18, 2025
Google search engine

Homeರಾಜ್ಯಮತ್ತೆ ಬೆಂಗಳೂರು- ಬೀದರ್‌ ವಿಮಾನ ಸೇವೆ ಮರು ಆರಂಭ: ಸಚಿವ ಎಂ.ಬಿ. ಪಾಟೀಲ ಸೂಚನೆ

ಮತ್ತೆ ಬೆಂಗಳೂರು- ಬೀದರ್‌ ವಿಮಾನ ಸೇವೆ ಮರು ಆರಂಭ: ಸಚಿವ ಎಂ.ಬಿ. ಪಾಟೀಲ ಸೂಚನೆ

ಬೀದರ್ : ಸ್ಥಗಿತಗೊಂಡಿರುವ ಬೀದರ್ – ಬೆಂಗಳೂರು ನಡುವಿನ ನಾಗರಿಕ ವಿಮಾನ ಸಂಚಾರ ಪುನಾರಂಭಿಸುವ ಕುರಿತಂತೆ ವಿವಿಧ ಖಾಸಗಿ ವಿಮಾನಯಾನ ಸೇವಾ ಸಂಸ್ಥೆಗಳೊಂದಿಗೆ ಚರ್ಚಿಸಿ ಎರಡು ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಚಿವರು ಈ ಸೂಚನೆ ನೀಡಿದರು.

ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವ ಪಾಟೀಲ ಸೂಚಿಸಿದರು.

ಈಶ್ವರ ಖಂಡ್ರೆ ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್ ಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್ ನಿಂದ ಸಂಪೂರ್ಣ ಸ್ಥಗಿತಗೊಂಡಿದೆ.

ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ವಿಮಾನಯಾನ ಸೇವೆ ಪುನಾರಂಭಿಸಬೇಕು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular