ಬೆಂಗಳೂರು: ಡಿಸಿಇಟಿ-25ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಹೇಳಿಕೆ ಬಿಡುಗಡೆಗೊಳಿಸಿದ್ದು, ಜು.29ರ ಮಧ್ಯಾಹ್ನ 3 ಗಂಟೆ ಬಳಿಕ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸ್‌ಲಿಂಗ್‌ನಲ್ಲಿ ಒಟ್ಟು 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದಿದ್ದಾರೆ.
ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಹೊರಬಿದ್ದ ನಂತರ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ