ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಘಟನೆ ವರದಿಯಾಗಿದೆ. ಪ್ಲಾಸ್ಟಿಕ್ ಮ್ಯಾಟ್ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ದುರ್ಘಟನೆಯಲ್ಲಿ ಓವರ್ ಸಜೀವದಹನವಾಗಿದ್ದಾನೆ. ಅಂಗಡಿಯಲ್ಲಿ ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಗರದ ನಗರತ್ ಪೇಟೆಯಲ್ಲಿರುವ ಪ್ಲ್ಯಾಸ್ಟಿಕ್ ಮ್ಯಾಟ್ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ. ರಾತ್ರಿ 3 ಘಂಟೆಯ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿಚಾರ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಒಟ್ಟು ಆರು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ ಎನ್ನಲಾಗಿದೆ. ಅಗ್ನಿ ಅವಘಡದಿಂದ ಭಾರೀ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ. ಘಟನೆ ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.