Friday, April 11, 2025
Google search engine

Homeಅಪರಾಧಬೆಂಗಳೂರು: ತಾಯಿ–ಮಗನನ್ನು ಅಪಹರಿಸಿ ಲೈಂಗಿಕ ಕಿರುಕುಳ; 9 ಜನರ ಬಂಧನ

ಬೆಂಗಳೂರು: ತಾಯಿ–ಮಗನನ್ನು ಅಪಹರಿಸಿ ಲೈಂಗಿಕ ಕಿರುಕುಳ; 9 ಜನರ ಬಂಧನ

ಬೆಂಗಳೂರು: ತಾಯಿ – ಮಗನನ್ನು ಅಪಹರಿಸಿದ್ದಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ರೌಡಿಶೀಟರ್​ಗಳು ಸೇರಿದಂತೆ 9 ಮಂದಿ ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಾಬುದ್ದೀನ್, ಸ್ವಾತಿ ಸೇರಿದಂತೆ 9 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಆಗಸ್ಟ್ 13ರಂದು ಯುವಕ ಹಾಗೂ ಆತನ ತಾಯಿಯನ್ನು ಅಪಹರಿಸಿ ಮನೆಯಲ್ಲಿ ಅಕ್ರಮವಾಗಿ ಇರಿಸಿ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಯುವಕ ಮತ್ತು ಆತನ ತಾಯಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ವಿಚಾರ ತಿಳಿದಿದ್ದ ಆರೋಪಿಗಳು ಕದ್ದ ಹಣದಲ್ಲಿ 2 ಲಕ್ಷ ರೂ. ನೀಡುವಂತೆ ಅಮ್ಮ, ಮಗನಿಗೆ ಬೆದರಿಕೆ ಹಾಕಿದ್ದಾರೆ. ಆದರೆ ಆರೋಪಿಗಳಿಗೆ ಯುವಕ ಮತ್ತು ಆತನ ತಾಯಿ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿಗಳು ತಾಯಿ, ಮಗನನ್ನು ಅಪಹರಿಸಿ ಮಹಿಳೆಯೊಬ್ಬರ ಮನೆಯಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದರು. ಬಳಿಕ ಇಬ್ಬರ ಬಳಿಯೂ ಹಣ ಇಲ್ಲ ಎಂದು ತಿಳಿದಾಗ ಅವರನ್ನು ಬಿಟ್ಟು ಕಳಿಸಿದ್ದರು.

ನಂತರ ನೊಂದ ಮಹಿಳೆ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಜೋಸೆಫ್ ಹಾಗೂ ಶ್ರೀನಿವಾಸ್ ರೌಡಿಶೀಟರ್​​ಗಳಾದರೆ, ಶಹಾಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular