Sunday, April 6, 2025
Google search engine

Homeರಾಜಕೀಯಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇ:ಲೋಪದೋಷ ಸರಿಪಡಿಸಿ:ನಿತಿನ್ ಗಡ್ಕರಿಗೆ ಸಿಎಂ ಮನವಿ

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇ:ಲೋಪದೋಷ ಸರಿಪಡಿಸಿ:ನಿತಿನ್ ಗಡ್ಕರಿಗೆ ಸಿಎಂ ಮನವಿ

ನವದೆಹಲಿ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಲೋಪದೋಷ ಸರಿಪಡಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ‍್ಧರಾಮಯ್ಯ ಮನವಿ ಮಾಡಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ನಿತಿನ್ ಗಡ್ಕರಿ ಅವರು ಭರವಸೆ ನೀಡಿದರು.
ಶಿರಾಡಿ ಘಾಟ್ ಸುರಂಗ ಮಾರ್ಗ ಕುರಿತಾಗಿಯೂ ಸಿಎಂ ಸಿದ್ಧರಾಮಯ್ಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.

RELATED ARTICLES
- Advertisment -
Google search engine

Most Popular