Friday, April 18, 2025
Google search engine

Homeರಾಜ್ಯಬೆಂಗಳೂರು: 20ಕ್ಕೂ ಹೆಚ್ಚು ಕಡೆಗಳಲ್ಲಿ ಎನ್ ಐಎ ದಾಳಿ

ಬೆಂಗಳೂರು: 20ಕ್ಕೂ ಹೆಚ್ಚು ಕಡೆಗಳಲ್ಲಿ ಎನ್ ಐಎ ದಾಳಿ

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಿದ ಬೆನ್ನಲ್ಲೆ ಮತ್ತೆ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್ ​ಐಎ, 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಅದರಂತೆ ಅಲಿ ಅಬ್ಬಾಸ್ ಮೊಬೈಲ್, ಲ್ಯಾಪ್ ಟಾಪ್ ರಿಟ್ರೀವ್ ಮಾಡಲಾಗಿತ್ತು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ ಎನ್ ​ಐಎ ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.

ಕರ್ನಾಟಕದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು ಐಸಿಸ್ ​ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತ ಉಗ್ರರನ್ನು ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು. ಅದರಲ್ಲಿ ಐಎಸ್‌ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಜೊತೆ ನಂಟು ಹೊಂದಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಮುಂಬೈ ಮೂಲದ ಶಂಕಿತ ಉಗ್ರ ಅಲಿ ಅಬ್ಬಾಸ್ ಮನೆ ಮೇಲೆ ಎನ್‌ ಐಎ ದಾಳಿ ನಡೆಸಿ ಬಂಧಿಸಿದ್ದರು.

ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಸಾಪ್ಟ್ ವೇರ್ ಉದ್ಯೋಗಿಯಾಗಿದ್ದು‌, ಐಸಿಸ್ ನೊಂದಿಗೆ ಸಂಪರ್ಕ್ ಹೊಂದಿದ್ದ ಎಂದು ತಿಳಿದುಬಂದಿದೆ.

ಜೊತೆಗೆ ಈತ ಟ್ಯಾನರಿ ರೋಡ್ ನಲ್ಲಿ ಉರ್ದು ಶಾಲೆ ನಡೆಸ್ತಿದ್ದ. ಈತನ ಪತ್ನಿ ಡಯಾಟಿಕ್ ಹಾಸ್ಪಿಟಲ್ ನಡೆಸುತ್ತಿದ್ದಾಳೆ. ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ಶಾಮಾಜ್ ಎಂಬುವರಿಂದ 2018ರಲ್ಲಿ 62 ಲಕ್ಷಕ್ಕೆ ಫ್ಲ್ಯಾಟ್ ಖರೀದಿ ಮಾಡಿದ್ದ ಅಲಿ, ತನ್ನ ಹೆಂಡತಿ ಮಕ್ಕಳು ಹಾಗೂ ತಂದೆ ಜೊತೆ ವಾಸವಿದ್ದನು.

RELATED ARTICLES
- Advertisment -
Google search engine

Most Popular