Thursday, April 30, 2026
Google search engine

Homeದೇಶಬೆಂಗಳೂರು ಮಳೆ ದುರಂತ : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಮೋದಿ ಸಂತಾಪ

ಬೆಂಗಳೂರು ಮಳೆ ದುರಂತ : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಮೋದಿ ಸಂತಾಪ

ಬೆಂಗಳೂರು/ನವದೆಹಲಿ : ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಗೋಡೆ ಕುಸಿದು ದುರಂತ ಸಂಭವಿಸಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇನ್ನು ಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಾಡಿರುವ ಮೋದಿ ಅವರು, ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಎಂದಿದ್ದಾರೆ.

ಅಲ್ಲದೆ, ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದೆ.

ನಿನ್ನೆ ಸಂಜೆ (ಏ.29) ಸುಮಾರು 5 ಗಂಟೆಯ ಸುಮಾರಿಗೆ ನಗರದಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆಗಿದ್ದು, ಮಳೆಯಿಂದ ತಪ್ಪಿಸಿಕೊಳ್ಳಲು ಪಾದಚಾರಿಗಳು ಮತ್ತು ಬೀದಿ ಬದಿಯ ವ್ಯಾಪಾರಿಗಳು ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಯ ಕೆಳಗೆ ಆಶ್ರಯ ಪಡೆದಿದ್ದರು. ಮಳೆಯ ತೀವ್ರತೆಗೆ ದುರ್ಬಲವಾಗಿದ್ದ ಗೋಡೆಯು ಏಕಾಏಕಿ ಕುಸಿದುಬಿದ್ದ ಪರಿಣಾಮ ಗೋಡೆಯ ಕೆಳಗಿದ್ದವರು ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯ ನಡೆಸಿದರೂ, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ತನಿಖೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular