Monday, April 21, 2025
Google search engine

Homeರಾಜ್ಯಸುದ್ದಿಜಾಲಬೆಂಗಳೂರು: ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ನಿನ್ನೆ (ಸೋಮವಾರ) ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎರಡು ಬೋನುಗಳನ್ನಿಟ್ಟು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಅಪಾರ್ಟ್ ಮೆಂಟ್ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಸುತ್ತಮುತ್ತ ಹುಡುಕಾಟ ನಡೆಸಲಾಗಿತ್ತು. ಆದರೆ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದೆ.

ಬೆಳಿಗ್ಗಿನ ಸಮಯದಲ್ಲಿ ಓಡಾಡಲು ಭಯವಾಗುತ್ತಿದೆ. ಜನರು ವಾಕ್ ಬರುವುದನ್ನು ನಿಲ್ಲಿಸಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ಚಿರತೆ ಕಾಣಿಸಿಕೊಂಡ ದಿನದಿಂದ ಆತಂಕ ಶುರುವಾಗಿದೆ. ಆದಷ್ಟು ಬೇಗ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯ ನಿವಾಸಿ ಸೌಂದರ್ ರಾಜ್ ಮನವಿ ಮಾಡಿದರು. ಅ. ೨೯ರ ರಾತ್ರಿ ಬೊಮ್ಮನಹಳ್ಳಿಯ ಕೂಡ್ಲು ಭಾಗದ ಜನವಸತಿ ಪ್ರದೇಶ ಸಮೀಪದ ಕಾರಿನ ಗ್ಯಾರೇಜ್‌ನಲ್ಲಿಯೂ ಚಿರತೆ ಓಡಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಭಯಕ್ಕೆ ಇಲ್ಲಿನ ಜನರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಸಂಚರಿಸುತ್ತಿದ್ದಾರೆ.

ಚಿರತೆ ಕಾರ್ಯಾಚರಣೆಗಾಗಿ ಮೈಸೂರಿನಿಂದ ವಿಶೇಷ ತಂಡ ಬೆಂಗಳೂರಿಗೆ ಆಗಮಿಸಿದೆ. ಈಗಾಗಲೇ ಹಲವೆಡೆ ಚಿರತೆ ಹಿಡಿದು ಪರಿಣತರಾಗಿರುವ ಸಿಬ್ಬಂದಿ ಈ ತಂಡದಲ್ಲಿದ್ದಾರೆ. ಸುರಕ್ಷತಾ ಜಾಕೆಟ್ ಬಳಸಿ ತಂಡ ಅಖಾಡಕ್ಕಿಳಿದಿದೆ. ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿ ಪಿಸಿಸಿಎಫ್ ಸುಭಾಷ್ ಮಾಲ್ಕೆಡೆ, ಡಿಎಫ್‌ಒ ರವೀಂದ್ರ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಜನರು ಸಾಕಷ್ಟು ಹುಷಾರಾಗಿರಬೇಕು. ಮೈಸೂರಿನಿಂದ ಟಾಸ್ಕ್ ಫೋರ್ಸ್ ಬಂದಿದೆ. ವೆಟರ್ನರಿ ಡಾಕ್ಟರ್ ಟ್ರ್ಯಾಂಕುಲೈಸ್ ಮಾಡುತ್ತಾರೆ. ಚಿರತೆ ಈಗ ಸ್ಟ್ರೆಸ್‌ನಲ್ಲಿರುತ್ತೆ. ಈ ಸಮಯದಲ್ಲಿ ಯಾರೂ ಇಲ್ಲಿರಬಾರದು. ಅಪಾರ್ಟ್‌ಮೆಂಟ್ ಬಳಿ ಎಚ್ಚರಿಕೆವಹಿಸಿ. ಕಾರ್ಯಾಚರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಸುಭಾಷ್ ಮಾಲ್ಕೆಡೆ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular