Friday, April 4, 2025
Google search engine

Homeರಾಜ್ಯಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ ವರೆಗೆ ಸಂಚಾರ ನಿರ್ಬಂಧ

ಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ ವರೆಗೆ ಸಂಚಾರ ನಿರ್ಬಂಧ

ಬೆಂಗಳೂರು: ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ 200 ಮೀಟರ್ ರಸ್ತೆಯಲ್ಲಿ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಫೆ.1) ರಿಂದ ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನ ಸಂಚಾರ ನಿರ್ಬಂಧ

ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ

ಪೀಣ್ಯ 100 ಅಡಿ ರಸ್ತೆಯ ಮೂಲಕ ಜಾಲಹಳ್ಳಿ ಕ್ರಾಸ್ ಜಂಕ್ಷನ್​ಕಡೆಗೆ ಹೋಗುವ ವಾಹನಗಳು: ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಲ್ಲಿ ಬಲಕ್ಕೆ ಚಲಿಸಿ ರಸ್ತೆಯ ಮತ್ತೊಂದು ಬದಿಯ ಮೂಲಕ ದ್ವಿಮುಖ ಸಂಚಾರ ರಸ್ತೆಯ ಮೂಲಕ ಸಾಗಬಹುದು.

ಎಲ್ಲಾ ಮಾದರಿಯ ಸರಕು ಸಾಗಣೆ ವಾಹನಗಳು ಟಿವಿಎಸ್ ಕ್ರಾಸ್ ಜಂಕ್ಷನ್​ನಿಂದ ಪೀಣ್ಯ ಪೊಲೀಸ್ ಠಾಣೆ ರಸ್ತೆಯ ಮೂಲಕ ಸಾಗಿ, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್​ನಲ್ಲಿ ತುಮಕೂರು ರಸ್ತೆಯ ಮೂಲಕ ಸಾಗಬಹುದು.

ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆ:

ಪೀಣ್ಯ ಪೊಲೀಸ್ ಠಾಣೆ ರಸ್ತೆ, ಪೀಣ್ಯ 100 ಅಡಿ ರಸ್ತೆ (ಜಾಲಹಳ್ಳಿ ಕ್ರಾಸ್ ನಿಂದ ಟಿವಿಎಸ್ ಕ್ರಾಸ್ ವರೆಗೆ) ಹಾಗೂ ಪೀಣ್ಯ 1ನೇ ಕ್ರಾಸ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಕಾಮಗಾರಿ ಪೂರ್ಣಗೊಳ್ಳುವವರೆಗೆ, ತಾತ್ಕಾಲಿಕವಾಗಿ ನಿರ್ಬಂಧಿಸಿಲಾಗಿದೆ.

RELATED ARTICLES
- Advertisment -
Google search engine

Most Popular