ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಮುಂದುವರಿದಿದ್ದು 45 ಇನ್‌ಸ್ಪೆಕ್ಟರ್ ಹಾಗೂ 6 ಮಂದಿ ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಂಬಂಧಿಸಿದ ಘಟಕಾಧಿಕಾರಿಗಳು ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ, ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚಿಸಬೇಕು. ಬಿಡುಗಡೆಗೊಂಡಿರುವ ಹಾಗೂ ವರದಿ ಮಾಡಿದ ಬಗ್ಗೆ ಕಚೇರಿಗೆ ಪಾಲನಾ ವರದಿ ಸಲ್ಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ವರ್ಗಾವಣೆ ಆದೇಶದಲ್ಲಿ ಸ್ಥಳನಿಯುಕ್ತಿಗೊಳಿಸದೇ ಇರುವ ಡಿವೈಎಸ್‌ಪಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.